ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

INDvsSA ಏಕದಿನ ಸರಣಿ: ಚಹರ್ ಔಟ್‌, ವಾಷಿಂಗ್ಟನ್​​ ಸುಂದರ್‌​​​​​ ಇನ್​​​

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಉಳಿದ ಪಂದ್ಯಗಳಿಗೆ ಟೀಂ ಇಂಡಿಯಾದಲ್ಲಿ ದೀಪಕ್ ಚಹರ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ಬಿಸಿಸಿಐನ ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಚಹರ್ ಬದಲಿಗೆ ಸುಂದರ್ ಹೆಸರನ್ನು ಶನಿವಾರ ಪ್ರಕಟಿಸಿದೆ. ಇಂದೋರ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಮತ್ತು ಅಂತಿಮ T20I ನಂತರ ಚಹರ್ ಬೆನ್ನು ನೋವು ಹೊಂದಿದ್ದರು. ಅಲ್ಲದೇ ಲಕ್ನೋದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ XIನಲ್ಲಿ ಕಾಣಿಸಿಕೊಂಡಿರಲಿಲ್ಲ.

30 ವರ್ಷ ವಯಸ್ಸಿನ ಚಹರ್ ಈಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (NCA) ಹಿಂತಿರುಗಲಿದ್ದು, ಅಲ್ಲಿನ ವೈದ್ಯಕೀಯ ತಂಡ ಅವರ ಮೇಲ್ವಿಚಾರಣೆ ಮಾಡಲಿದೆ. ಚಹರ್ 9 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಈ ಪಂದ್ಯಗಳಲ್ಲಿ, ಅವರು 3/27 ರ ಅತ್ಯುತ್ತಮ ಬೌಲಿಂಗ್ ಅಂಕಿ - ಅಂಶಗಳೊಂದಿಗೆ 15 ವಿಕೆಟ್​ಗಳನ್ನು ಪಡೆದಿದ್ದಾರೆ.

ಭಾರತ ಏಕದಿನ ತಂಡ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.

Edited By : Vijay Kumar
PublicNext

PublicNext

08/10/2022 07:04 pm

Cinque Terre

71.88 K

Cinque Terre

0

ಸಂಬಂಧಿತ ಸುದ್ದಿ