ರಾಂಚಿ: ಶ್ರೇಯಸ್ ಅಯ್ಯರ್ ಅಜೇಯ ಶತಕ ಹಾಗೂ ಇಶಾನ್ ಕಿಶನ್ ಅರ್ಧಶತಕದ ಸಹಾಯದಿಂದ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು 1-1 ಅಂತರದಿಂದ ಸಮಬಲ ಸಾಧಿಸಿ ಸರಣಿಯನ್ನು ಜೀವಂತವಾಗಿಸಿಕೊಂಡಿದೆ.
ರಾಂಚಿಯಲ್ಲಿ ಇಂದು ನಡೆದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 7 ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿತ್ತು. ತಂಡದ ಪರ ರೀಜಾ ಹೆಂಡ್ರಿಕ್ಸ್ 74 ರನ್ ಹಾಗೂ ಐಡೆನ್ ಮಾರ್ಕ್ರಾಮ್ 79 ರನ್ ಗಳಿಸಿದ್ದರು. ಬಳಿಕ ಬ್ಯಾಟಿಂಗ್ ಮಾಡಿದ ಭಾರತವು 25 ಎಸೆತಗಳು ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 282 ರನ್ ಗಳಿಸಿ ಗೆಲುವು ದಾಖಲಿಸಿದೆ. ಭಾರತದ ಪರ ಶ್ರೇಯಸ್ ಅಯ್ಯರ್ ಅಜೇಯ 113 ರನ್, ಇಶಾನ್ ಕಿಶನ್ 95 ರನ್, ಸಂಜು ಸ್ಯಾಮ್ಸನ್ ಅಜೇಯ 29 ರನ್ ಹಾಗೂ ಶುಭ್ಮನ್ ಗಿಲ್ 28 ರನ್ ಗಳಿಸಿದರು.
PublicNext
09/10/2022 09:13 pm