ನವದೆಹಲಿ: ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡವು ಕೇವಲ 99 ರನ್‌ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಭಾರತಕ್ಕೆ 100 ರನ್‌ಗಳ ಗುರಿ ಸಿಕ್ಕಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 27.1 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್ ಕಳೆದುಕೊಂಡು 99 ರನ್ ಗಳಿಸಿದೆ. ಭಾರತದ ಪರ ಕುಲದೀಪ್ ಯಾದವ್ 4 ವಿಕೆಟ್ ಉರುಳಿಸಿದರೆ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಹಾಗೂ ಶಹಬಾಜ್ ಅಹ್ಮದ್ ತಲಾ 2 ವಿಕೆಟ್ ಪಡೆದುಕೊಂಡರು.
PublicNext
11/10/2022 04:33 pm