ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

INDvsSA: ಸರಣಿ ಗೆದ್ದ ಟೀಂ ಇಂಡಿಯಾ

ನವದೆಹಲಿ: ಅದ್ಭುತ ಬೌಲಿಂಗ್ ಪ್ರದರ್ಶನ ಹಾಗೂ ಬ್ಯಾಟಿಂಗ್ ಸಹಾಯದಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ‌ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದು ಬೀಗಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 27.1 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್‌ ಕಳೆದುಕೊಂಡು 99 ರನ್‌ ಗಳಿಸಿತ್ತು. ಇನ್ನು ಇದೇ ವೇಳೆ ಭಾರತದ ಪರ ಕುಲದೀಪ್ ಯಾದವ್ 4 ವಿಕೆಟ್‌ ಉರುಳಿಸಿದರೆ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಹಾಗೂ ಶಹಬಾಜ್ ಅಹ್ಮದ್ ತಲಾ 2 ವಿಕೆಟ್ ಪಡೆದುಕೊಂಡಿದ್ದರು.

ಬಳಿಕ‌ ಬ್ಯಾಟಿಂಗ್ ಮಾಡಿದ ಭಾರತ ತಂಡವು 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 103 ರನ್ ಬಾರಿಸಿ ಗೆಲುವು ಸಾಧಿಸಿತು. ತಂಡದ ಪರ ಶುಭ್ಮನ್ ಗಿಲ್ 49 ರನ್ ಹಾಗೂ ಶ್ರೇಯಸ್ ಅಯ್ಯರ್ 28 ರನ್ ದಾಖಲಿಸಿದರು.

Edited By : Vijay Kumar
PublicNext

PublicNext

11/10/2022 06:40 pm

Cinque Terre

47.14 K

Cinque Terre

2

ಸಂಬಂಧಿತ ಸುದ್ದಿ