", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1738084200-WhatsApp-Image-2025-01-28-at-10.39.51-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು : ಆಯಿಲ್‌ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಹೊರವಲಯದ ಅಂತಸರನಹಳ...Read more" } ", "keywords": " Tumakuru, Oil Tank Blast, Industrial Accident, Worker Deaths, Karnataka News, Tumakuru News, Workplace Safety, Explosion Accident, Chemical Plant Blast.,Tumkur,Accident", "url": "https://publicnext.com/article/nid/Tumkur/Accident" } ತುಮಕೂರು : ಆಯಿಲ್ ಟ್ಯಾಂಕ್ ಬ್ಲಾಸ್ಟ್ : ಇಬ್ಬರು ಕಾರ್ಮಿಕರ ದುರ್ಮರಣ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಆಯಿಲ್ ಟ್ಯಾಂಕ್ ಬ್ಲಾಸ್ಟ್ : ಇಬ್ಬರು ಕಾರ್ಮಿಕರ ದುರ್ಮರಣ

ತುಮಕೂರು : ಆಯಿಲ್‌ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಹೊರವಲಯದ ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಅಂತಸರಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವಂತ ಪರಿಮಳ ಆಗ್ರೋ ಫುಡ್ ಇಂಡಸ್ಟ್ರೀಸ್‌ ನಲ್ಲಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಭತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವ ಫ್ಯಾಕ್ಟರಿಯಲ್ಲಿ ಈ ಅವಘಡ ಸಂಭವಿಸಿದೆ. ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿದೆ. ಆಗ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಕಾರ್ಮಿಕರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Edited By : Shivu K
PublicNext

PublicNext

28/01/2025 10:41 pm

Cinque Terre

51.21 K

Cinque Terre

0