ಕೊರಟಗೆರೆ : ತಾಲ್ಲೂಕಿನ ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿಕ್ಕ ಪಾಲನಹಳ್ಳಿ ಗೇಟ್ ಬಳಿ ಇಂದು ಮಧ್ಯಾಹ್ನ ಬೈಕ್ ಮತ್ತು ಕಾರ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ರಾಕೇಶ್ ಎಂಬುವವರ ಕಾಲು ಮುರಿದಿದ್ದು ಆತನ ಪತ್ನಿ ಗಂಭೀರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಅಪಘಾತದಲ್ಲಿ ಕಾಲು ಮುರಿದುಕೊಂಡಿರುವ ರಾಕೇಶ್ ಚಿನಕವಜ್ರ ಗ್ರಾಮದ ವ್ಯಕ್ತಿ ಎಂದು ತಿಳಿದು ಬಂದಿದ್ದು ರಾಕೇಶ್ ಮತ್ತು ಅವರ ಪತ್ನಿ ಚಿನಕವಜ್ರ ಗ್ರಾಮದಿಂದ ಅಳ್ಳಾಲಸಂದ್ರ ಗ್ರಾಮಕ್ಕೆ ತೆರಳುತ್ತಿದ್ದಸಂದರ್ಭದಲ್ಲಿ ಅಪಘಾತ ನಡೆದಿದೆ.
ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೋಳಾಲ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್ ತುಮಕೂರು.
PublicNext
25/09/2022 06:17 pm