ತುಮಕೂರು: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕೊಲೆಯಾದ ದುರ್ದೈವಿಯನ್ನು ಮುಬಾರಕ್ ಪಾಷಾ ಎಂದು ಗುರುತಿಸಲಾಗಿದೆ. ಈತ ತುಮಕೂರು ನಗರದ ಜಿಸಿಆರ್ ಕಾಲೋನಿ ನಿವಾಸಿಯಾಗಿದ್ದು, ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡ್ತಿದ್ದ ಎನ್ನಲಾಗಿದೆ.
ಇನ್ನೂ ತಡರಾತ್ರಿ ಖಾಸಗಿ ಬಸ್ ನಿಲ್ದಾಣಕ್ಕೆ ಬಂದಿದ್ದ ಮುಬಾರಕ್ ಪಾಷಾ ಮತ್ತು ಆರೋಪಿಗಳ ನಡುವೆ ಗಲಾಟೆ ನಡೆದಿದೆ ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಗಲಾಟೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ತುಮಕೂರು ನಗರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
PublicNext
07/10/2022 04:26 pm