ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಧುಗಿರಿ: ಕರಡಿ ದಾಳಿಯಿಂದ ಗಾಯಗೊಂಡ ರೈತ

ಮಧುಗಿರಿ: ತಾಲೂಕಿನ ಐಡಿ ಹಳ್ಳಿ ಹೋಬಳಿ ಯಲ್ಲಿ ರೈತನ ಮೇಲೆ ಕರಡಿ ದಾಳಿ ಮಾಡಿದ ಪರಿಣಾಮ ರೈತನ ಕೈಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ನಡೆದಿದೆ.

ಯರಮಲ್ಲೇನಹಳ್ಳಿ ನಿವಾಸಿ ಶ್ರೀರಾಮ ರೆಡ್ಡಿ ಕರಡಿ ದಾಳಿ ಯಿಂದ ಗಾಯಗೊಂಡ ರೈತ. ಇವರು ಎಂದಿನಂತೆ ಬೆಳಿಗ್ಗೆ 8 ಗಂಟೆಯ ಸಮಯದಲ್ಲಿ ಮೇವು ತರಲು ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ಕರಡಿ ದಾಳಿ ನಡೆಸಿದ ಪರಿಣಾಮ ಕೈಗೆ ಗಾಯವಾಗಿದ್ದು, ಐ.ಡಿ ಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಮಧು ಗಿರಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾ ಗಿದ್ದಾರೆ. ವಲಯ ಅರಣ್ಯಾಧಿಕಾರಿ ರವಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

27/09/2022 07:02 pm

Cinque Terre

9.02 K

Cinque Terre

0