ಪಾವಗಡ ತಾಲ್ಲೂಕು ಗಡಿ ಭಾಗವಾದ ವೈ.ಎನ್ ಹೊಸಕೋಟೆ ಸಮೀಪ ಇರುವಂತಹ ಬೂದಿಬೆಟ್ಟ ಗ್ರಾಮ ಪಂಚಾಯಿತಿ ಕಚೇರಿಯನ್ನು ಸ್ಪೋಟಕ ಬಳಸಿ ಸ್ಪೋಟಿಸುವ ಘಟನೆ ವರದಿಯಾಗಿದೆ.
ರಾತ್ರಿ ಸ್ಫೋಟ ಸಂಭವಿಸಿದ್ದು, ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಮಾಡಿದ್ದು, ಪರಿಣಾಮ ಗ್ರಾಮ ಪಂಚಾಯತಿ ಕಚೇರಿ ಗೋಡೆಗಳು ಬಿರುಕು ಬಿಟ್ಟಿವೆ. ಗ್ರಾಮ ಪಂಚಾಯಿತಿ ಕಚೇರಿಯ ಹಿಂಭಾಗದ ಕಿಟಕಿಯನ್ನು ಕಿತ್ತು ಒಳ ನುಗ್ಗಿರುವ ದುಷ್ಕ ರ್ಮಿಗಳು ಸಭಾಂಗಣದ ಮೂಲೆಯಲ್ಲಿ ಇಳಿಸಿರುವ ದಾಖಲೆಗಳ ಅಲೆಮಾರಿಗೆ ಹೊಂದಿ ಕೊಂಡಂತೆ ಇರುವ ಕುರ್ಚಿಯ ಮೇಲೆ ಸ್ಫೋಟಕ ಇಟ್ಟು ಸ್ಟೋಟಿಸಿದ್ದಾರೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ,
ಇದರಿಂದ ಕಚೇರಿಯ ಕುರ್ಚಿಗಳು ಸುಟ್ಟು ಕರಕಲಾಗಿದ್ದು, ರಾತ್ರಿ ಇದ್ದಕ್ಕಿದ್ದಂತೆ ಭಾರಿ ಸದ್ದು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ಗಾಬರಿಗೊಂಡ ಹೋಗಿ ನೋಡಿದಾಗ ಸ್ಥಳದಲ್ಲಿ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದ ದೃಶ್ಯ ಕಂಡು ಬಂದಿದೆ. ಜಿಲೆಟಿನ್ ಪೌಡರ್ ಬಳಸಿ ಈ ಕೃತ್ಯ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಪೊಲೀಸರು ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
ವರದಿ ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್ ತುಮಕೂರು
PublicNext
17/09/2022 12:32 pm