ತುಮಕೂರು: ಪಾವಗಡ ತಾಲ್ಲೂಕು ಗಡಿ ಭಾಗ ಬೂದಿಬೆಟ್ಟ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದೆ.
ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸ್ಫೋಟ ನಡೆಸಿದ್ದಾರೆ ಎನ್ನುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿವೆ. ಕಚೇರಿಯ ಹಿಂಭಾಗದ ಕಿಟಕಿಯನ್ನು ಕಿತ್ತು ಒಳ ನುಗ್ಗಿರುವ ದುಷ್ಕರ್ಮಿಗಳು ಸಭಾಂಗಣದ ಮೂಲೆಯಲ್ಲಿರುವ ದಾಖಲೆಗಳ ಅಲೆಮಾರಿಗೆ ಹೊಂದಿಕೊಂಡಂತೆ ಇರುವ ಕುರ್ಚಿಯ ಮೇಲೆ ಸ್ಫೋಟಕ ಇಟ್ಟಿದ್ದು ಕಂಡು ಬಂದಿದೆ. ಸ್ಫೋಟದಿಂದ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿದ್ದು, ಕುರ್ಚಿಗಳು ಸುಟ್ಟು ಹೋಗಿವೆ.
ರಾತ್ರಿ ಇದ್ದಕ್ಕಿದ್ದಂತೆ ಭಾರಿ ಸದ್ದು ಕೇಳಿ ಬಂತು. ಗಾಬರಿಗೊಂಡ ಜನರು ಹೋಗಿ ನೋಡಿದಾಗ ಸ್ಥಳದಲ್ಲಿ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದ ದೃಶ್ಯ ಕಂಡು ಬಂದಿದೆ. ಜಿಲೆಟಿನ್ ಪೌಡರ್ ಬಳಸಿ ಈ ಕೃತ್ಯ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಪೊಲೀಸ್ ತನಿಖೆಯಿಂದಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.
Kshetra Samachara
16/09/2022 03:15 pm