ತುಮಕೂರು: ಹೆಜ್ಜೇನು ಕಡಿದು ಹಸುಮೇಯಿಸುತ್ತಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿ ಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಮಣ್ಣ(48) ಮೃತ ವ್ಯಕ್ತಿ. ತೋಟದ ಬಳಿ ಹಸು ಮೇಯಿಸುವಾಗ ಹೆಜ್ಜೇನು ದಾಳಿ ನಡೆಸಿವೆ. ಪರಿಣಾಮ ರಾಮಣ್ಣ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ರಾಜು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
22/09/2022 11:38 pm