ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ತುಂಡು ಭೂಮಿಗಾಗಿ ಜೋಡಿ ಕೊಲೆ

ತುಮಕೂರು: ತಂಡು ಭೂಮಿಗಾಗಿ ನಡೆಯುತ್ತಿದ್ದ ಜಗಳ ಎರಡು ಜೀವಗಳನ್ನು ಬಲಿ ಪಡೆದಿದೆ. ನಿವೇಶನವೊಂದರ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ.

ನಿವೇಶನವೊಂದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿದ್ದು ಶ್ರೀಧರಗುಪ್ತ ಮತ್ತು ಸಹಚರರು ಏಕಾಏಕಿ ಮಾರಕಾಸ್ತ್ರಗಳಿಂದ ಮೂವರಿಗೆ ತಿವಿದು ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಿಡಿಗೇಶಿ ಗ್ರಾಮದ ಶಿಲ್ಪ(35), ರಾಮಾಂಜಿನೇಯ(42), ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಮಲ್ಲಿಕಾರ್ಜುನ ಅವರಿಗೆ ಗಂಭೀರ ಗಾಯವಾಗಿದ್ದು ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಪಷ್ಟೀಕರಣ ನೀಡಿದ್ದಾರೆ.

Edited By : Shivu K
PublicNext

PublicNext

23/09/2022 11:12 am

Cinque Terre

24.54 K

Cinque Terre

1