ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: 108ಕ್ಕೆ ಮೊದಲ ಬಲಿ

ಮಧುಗಿರಿ: ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗದೇ ಮಹಿಳೆಯೊಬ್ಬರು ಮನೆಯಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಐಡಿಹಳ್ಳಿ ಗ್ರಾಮದ ಬಡ ಕುಟುಂಬದ 65 ವರ್ಷದ ಜಯಮ್ಮ ಮೃತಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲು 108ಕ್ಕೆ ಕುಟುಂಬಸ್ಥರು ಕರೆ ಮಾಡಿದ್ದರು. ಆದರೆ ಒಂದು ಗಂಟೆ ಕಳೆದರೂ ಆಂಬ್ಯುಲೆನ್ಸ್ ಬಾರದೆ ಸಕಾಲಕ್ಕೆ ಚಿಕಿತ್ಸೆ ಲಭಿಸದೆ ಮಹಿಳೆ ಸಾವನ್ನಪ್ಪಿದ್ದಾರೆ.

ಟಿಎಚ್‌ಓಗೆ ಕರೆ ಮಾಡಿದ ಬಳಿಕ ಆಂಬ್ಯುಲೆನ್ಸ್ ಸ್ಥಳಕ್ಕೆ ಬಂದರೂ ಸಹ ಆಂಬ್ಯುಲೆನ್ಸ್ ಬರುವಷ್ಟರಲ್ಲಿ ಜಯಮ್ಮ ಕೊನೆಯುಸಿರೆಳೆದಿದ್ದರು. ಆಂಬ್ಯುಲೆನ್ಸ್ ಸಕಾಲಕ್ಕೆ ದೊರಕುತ್ತಿದ್ದರೆ, ಮಹಿಳೆಯ ಪ್ರಾಣ ಉಳಿಸಬಹುದಿತ್ತು ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Vijay Kumar
PublicNext

PublicNext

25/09/2022 03:56 pm

Cinque Terre

20.54 K

Cinque Terre

1