ತುಮಕೂರು : ದಂಪತಿಗಳಿಬ್ಬರೂ ವಿಷ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ತಾಲೂಕಿನ ಮಿಡಿಗೇಶಿ ಹೋಬಳಿಯ ಮಲ್ಲನಾಯಕನ ಹಳ್ಳಿ ಗ್ರಾಮದ ದಂಪತಿ ಗಳಾದ ಬೆಳ್ಳಿ ನರಸಿಂಹಯ್ಯ(65) ಮತ್ತು ಹನುಮಕ್ಕ(55) ಇವರು ಕ್ರಿಮಿ ನಾಶಕ ಔಷಧಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬೆಳಗ್ಗೆ ಕೆಲಸಕ್ಕೆಂದು ಹೋದ ಇವರು ಸಜ್ಜಿಗೇನಹಳ್ಳಿ ಬಳಿ ಸಾಂಸಾರಿಕ ಜೀವನಕ್ಕೆ ಬೇಸತ್ತು ವಿಷ ಸೇವಿಸಿದ್ದಾರೆ ಎನ್ನಲಾಗಿದೆ.
ಸದ್ಯ ಇವರಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
29/09/2022 08:36 am