ಪಾವಗಡ: ಬೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ, ಹೊಲದಲ್ಲಿ ನೇತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟ ನೆ ಪಾವಗಡ ತಾಲೂಕಿನಕೆಂಚ ಮ್ಮನಹಳ್ಳಿ ಗ್ರಾಮದಲ್ಲಿ ಸೋಮ ವಾರ ನಡೆದಿದೆ.
ಮಂಗಳ ಗೌರಮ್ಮ 26 ವರ್ಷ ಮೃತ ದುರ್ದೈವಿ ಆಗಿದ್ದು, ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಟುಂಬಸ್ಥರು ಮಹಿಳೆಯ ಶವ ಪಾವಗಡ ಪಟ್ಟಣದ ಬೆಸ್ಕಾಂ ಕಚೇರಿ ಮುಂದಿಟ್ಟು ಪ್ರತಿಭಟನೆ ನಡೆಸಿ ಸಮಸ್ಯೆಯ ಬಗ್ಗೆ ಕಳೆದ ಮೂರು ವರ್ಷದಿಂದ ಮಾಹಿತಿ ತಿಳಿಸಿದರು ಬೆಸ್ಕಾಂ ನಿರ್ಲಕ್ಷ್ಯ ಧೋರಣೆಯಿಂದ ಮಹಿಳೆ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಆರೋಪಿಸಿದರು. ಪ್ರತಿಭಟನೆ ನಿಲ್ಲಿಸುವಂತೆ ಮನವೊಲಿಸಲು ಪೋಲೀಸರ ಹರಸಾಹಸ ಪಟ್ಟ ಘಟನೆ ನಡೆದಿದೆ. ಪಾವಗಡ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
Kshetra Samachara
10/10/2022 10:47 pm