ಮಧುಗಿರಿ: ಗಂಡ ಹೆಂಡತಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಗಂಡನೇ ಹೆಂಡತಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಸೋಮವಾರ ಸಂಜೆ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಷ್ಪಲತಾ (24) ಕೊಲೆಯಾದ ಮಹಿಳೆ. ಕೂಲಿಯ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿಯ ನಡುವೆ ಮಾತಿಗೆ ಮಾತು ಬೆಳೆದಿದ್ದು, ಜಗಳ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಗಂಡ ರಾಮಾಂಜನೇಯ ತನ್ನ ಹೆಂಡತಿಯ ಮೇಲೆ ಮಚ್ಚಿ ನಿಂದ ಬೀಸಿದ್ದು ಹೆಂಡತಿ ಮನೆಯಲ್ಲಿಯೇ ಮೃತಪಟ್ಟಿದ್ದು ಗಂಡ ರಾಮಾಂಜನೇಯ ತಲೆಮರೆಸಿಕೊಂಡಿದ್ದಾನೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಗಂಡ ರಾಮಾಂಜನೇಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
PublicNext
11/10/2022 06:05 pm