ಹಿಜಾಬ್ ಕುರಿತಾಗಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಎಲ್ಲರೂ ಈ ತೀರ್ಪನ್ನು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುದೀರ್ಘ ಚರ್ಚೆ ವಾದ ಪ್ರತಿ ವಾದ ಆಲಿಸಿ ಕೋರ್ಟ ತೀರ್ಪು ಕೊಟ್ಟಿದೆ. ೧೫ ದಿನಗಳ ಕಾಲ ಸಮಯವಕಾಶದ ನಂತರ ಇವತ್ತು ತೀರ್ಪು ಪ್ರಕಟವಾಗಿದೆ. ಸರ್ಕಾರ ಹೊರಡಿಸಿದ ವಸ್ತ್ರ ಸಂಹಿತೆ ಕಾನೂನು ಪಾಲನೆ ಮಾಡಬೇಕು ಎಂದು ತೀರ್ಪು ಕೊಟ್ಟಿದೆ. ಪೂರ್ಣಪೀಠದ ಆದೇಶ ಬಂದಿದೆ. ಯಾವುದಕ್ಕೂ ಅವಕಾಶ ಮಾಡಿಕೊಡದೇ ಶಾಂತಿಯುತ ವಾತಾವರಣಕ್ಕೆ ಎಲ್ಲರೂ ಸಹಕರಿಸಬೇಕು. ಶಿಸ್ತು ನಿಯಮ ಪಾಲನೆ ಮಾಡಿ ಕರ್ನಾಟಕದ ಸಂಸ್ಕೃತಿ ಪರಂಪರೆ ಎತ್ತಿ ಹಿಡಿದು ಶಾಂತಿಯುತವಾಗಿರಬೇಕು. ಶಾಲೆ ಎಂದಮೇಲೆ ಎಲ್ಲರೂ ಪ್ರೀತಿ ವಿಶ್ವಾಸ ದಿಂದ ಇರಬೇಕು ಎಂದು ಶ್ರೀಗಳು ಮನವಿ ಮಾಡಿದ್ದಾರೆ.
Kshetra Samachara
15/03/2022 01:07 pm