ತುಮಕೂರು : ಬರುವ ಮಾರ್ಚ್ ಮಾಹೆಗೆ ಆರ್ಥಿಕ ವರ್ಷ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾಗಿರುವ ಅನುದಾನ ರದ್ದಾಗದಂತೆ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ದೀಪಾ ಚೋಳನ್ ಅವರು ಎಲ್ಲಾ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಿಂಕ್ ಡಾಕ್ಯುಮೆಂಟ್, ರಾಜ್ಯ ಹಾಗೂ ಕೇಂದ್ರ ದಿಂದ ಯಾವುದೇ ಕಾಮಗಾರಿ/ಕಾರ್ಯಕ್ರಮ/ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ರದ್ದಾಗದಂತೆ ಈ ಆರ್ಥಿಕ ವರ್ಷದೊಳಗಾಗಿ ಖರ್ಚು ಮಾಡಬೇಕು ಎಂದು ನಿರ್ದೇಶನ ನೀಡಿದರು.
Kshetra Samachara
28/01/2025 06:26 pm