ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ತುಮಕೂರಿನಲ್ಲಿ ದಸರಾ ಲಾಂಛನ ಬಿಡುಗಡೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಯಾವ ಚರ್ಚೆಯೂ ನಡೆಯುತ್ತಿಲ್ಲ. ಈ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಕೃಷಿ ಪಂಪ್ ಸಟ್ ಗಳಿಗೆ ಮೀಟರ್ ಅಳವಡಿಸುವ ಪ್ರಶ್ನೆಯೇ ಇಲ್ಲ ಎಂದರು.
ಕೇಂದ್ರ ಸರ್ಕಾರದ ಕುಸುಮ್ ಸಿ ಯೋಜನೆಯಡಿ ರಾಜ್ಯದ ಎರಡೂವರೆ ಲಕ್ಷ ರೈತರಿಗೆ ಸೋಲಾರ್ ಫೀಡರ್ ಮೂಲಕ ವಿದ್ಯುತ್ ಒದಗಿಸಲು ಯೋಜನೆ ಸಿದ್ಧವಾಗುತ್ತಿದೆ ಎಂದು ಸಚಿವರು ತಿಳಿಸಿದರು.
PublicNext
01/10/2022 07:27 pm