ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಕರ್ನಾಟಕ ನಾಮಕರಣವಾಗಿ 50 ವರ್ಷ!; ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಿಸೋಣ

ತುಮಕೂರು: ಕನ್ನಡ ನಾಡಿಗೆ ಕರ್ನಾಟಕ ಎಂದು ನಾಮಕರಣವಾಗಿ ಮುಂದಿನ ನವೆಂಬರ್ 1ಕ್ಕೆ 50 ವರ್ಷಗಳು ತುಂಬುವ ಹಿನ್ನೆಲೆಯಲ್ಲಿ ಸರ್ಕಾರ ಈ ಸಾಲಿನ ಕನ್ನಡ ರಾಜೋತ್ಸವವನ್ನು ಅರ್ಥ ಪೂರ್ಣವಾಗಿ ಆಚರಿಸುವಂತೆ ಕರುನಾಡ ವಿಜಯಸೇನೆಯ ಜಿಲ್ಲಾಧ್ಯಕ್ಷ ಅರುಣ್‍ಕುಮಾರ್ ಮತ್ತು ಪದಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಚಿವ ಸುನಿಲ್ ಕುಮಾರ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ದಸರಾ ಲಾಂಛನ ಬಿಡುಗಡೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸಿದ ವೇಳೆ ಮನವಿ ನೀಡಿದ ಅರುಣ್ ಕುಮಾರ್, ಸ್ವಾತಂತ್ರ ನಂತರ ಮೈಸೂರು ರಾಜ್ಯ ಎಂದು ಕರೆಯಲ್ಪ ಡುತಿದ್ದ ಕನ್ನಡಭಾಷೆ ಮಾತನಾಡುವ ಪ್ರದೇಶವನ್ನು, 1971 ರಲ್ಲಿ ಅಂದಿನ ಮುಖ್ಯ ಮಂತ್ರಿ ದೇವರಾಜು ಆರಸು ನೇತೃತ್ವದ ಸರ್ಕಾರ ಕರ್ನಾಟಕ ಎಂದು ನಾಮಕರಣ ಮಾಡಿದ್ದರು.

ಕರುನಾಡಿಗೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸುವ ನಿಟ್ಟಿನಲ್ಲಿ ಸರಕಾರ ಇದರ ಅಮೃತ ಮಹೋತ್ಸವ ಕಾರ್ಯಕ್ರಮ ವಾಗಿ ಕನ್ನಡ ರಾಜೋತ್ಸವ ಕಾರ್ಯಕ್ರಮವನ್ನು ಅದ್ದೂರಿ ಯಾಗಿ ಮತ್ತು ಅರ್ಥ ಪೂರ್ಣವಾಗಿ ಆಚರಿಸ ಬೇಕೆಂಬುದು ಕರುನಾಡ ವಿಜಯಸೇನೆಯ ಒತ್ತಾಯವಾಗಿದೆ ಎಂದರು.

ಹೋರಾಟಗಾರರಿಗೆ ರಾಜೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕೆಂಬುದು ನಮ್ಮ ಒತ್ತಾಯವಾಗಿ ಎಂದು ಮನವಿಯಲ್ಲಿ ಕೋರಿದ್ದಾರೆ. ಈ ವೇಳೆ ಕರುನಾಡ ವಿಜಯ ಸೇನೆಯ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗಂಗಾಧರ್ ಸೇರಿದಂತೆ ಇತರರು ಇದ್ದರು.

Edited By : Vijay Kumar
Kshetra Samachara

Kshetra Samachara

03/10/2022 10:49 pm

Cinque Terre

1.56 K

Cinque Terre

0

ಸಂಬಂಧಿತ ಸುದ್ದಿ