ತುಮಕೂರು: ಅಕ್ಟೋಬರ್ 15ರಂದು ತುಮಕೂರು ಜಿಲ್ಲೆಯಾದ್ಯಂತ ‘ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ’ ಅಭಿಯಾನ ನಡೆಯಲಿದೆ.
ಶಿರಾ ಹುಲಿಕುಂಟೆ ಹೋಬಳಿ ಯಾದಲಡಕು,ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ಮಲ್ಲಪ್ಪನಹಳ್ಳಿ, ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ದಿನ್ನೇಪಾಳ್ಯ,ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಬಿಸಿಲೇಹಳ್ಳಿ,ಕುಣಿಗಲ್ ತಾಲ್ಲೂಕು ಕಸಬಾ ಹೋಬಳಿ ಕಿತ್ನಮಂಗ್ಲ,ತಿಪಟೂರು ತಾಲ್ಲೂಕು ಕಿಬ್ಬನಹಳ್ಳಿ ಹೋಬಳಿ ರಜಾತಾದ್ರಿಪುರ, ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿ ಅಜ್ಜನಹಳ್ಳಿ,ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆ ಹೋಬಳಿ ರಾಮನಹಳ್ಳಿ, ಮಧುಗಿರಿ ತಾಲ್ಲೂಕಿನ ಕಸಬಾ ಹೋಬಳಿ ಕೆರೆಗಳ ಪಾಳ್ಯ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ್ಯಕ್ರಮ ನಡೆಯಲಿದೆ.
ತಾಲೂಕು ಮಟ್ಟದ ಅಧಿಕಾರಿ ಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸುತ್ತ ಮುತ್ತ ಲಿನ ಗ್ರಾಮಸ್ಥರು ಇದರ ಲಾಭವನ್ನು ಪಡೆದು ಕೊಳ್ಳುವಂತೆ ಅಧಿಕಾರಿಗಳು ಪ್ರಕಟಣೆಯನ್ನು ತಿಳಿಸಿದ್ದಾರೆ.
Kshetra Samachara
12/10/2022 05:42 pm