ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ನ.12ರಂದು ಬೃಹತ್ ಲೋಕ ಅದಾಲತ್; "ಪ್ರಕರಣ ತ್ವರಿತ ಇತ್ಯರ್ಥಕ್ಕೆ ಸದವಕಾಶ"

ತುಮಕೂರು: ಜಿಲ್ಲೆಯಾದ್ಯಂತ ನ.12 ರಂದು ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಸುಲಭ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತುಮಕೂರು ಜಿಲ್ಲಾ ಪ್ರಧಾನ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶರಾದ ಗೀತಾ ತಿಳಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ‌ ಮಾತನಾಡಿದ ಅವರು, ಲೋಕ ಅದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲ ಉದ್ದೇಶವೇ ಪಕ್ಷಗಾರರ ನಡುವೆ ರಾಜಿ ಸಂಧಾನ ಮಾಡುವ ಮೂಲಕ ಪ್ರಕರಣಗಳನ್ನು ಅತಿ ಶೀಘ್ರವಾಗಿ ಸೌಹಾರ್ದಯುತವಾಗಿ ಬಗೆಹರಿಸುವುದು ಹಾಗೂ ಪಕ್ಷಗಾರರ ನಡುವೆ ವೈಮನಸ್ಸು ಕಡಿಮೆ ಮಾಡಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುವುದು ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ 12.11.2022ರಂದು ತುಮಕೂರು ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಜನತಾ ನ್ಯಾಯಾಲಯ ಅಥವಾ ಲೋಕ ಅದಾಲತ್ ನಡೆಸಲು ಉದ್ದೇಶಿಸಿದ್ದು, ಸಾರ್ವಜನಿಕರು ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣ‌, ಕಾರ್ಮಿಕ ವಿವಾದಗಳು, ವಿದ್ಯುತ್- ನೀರಿನ ಶುಲ್ಕ ಈ ರೀತಿಯ ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ಮೋಟಾರ್ ಅಪಘಾತ ಪರಿಹಾರ, ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣ, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಬಡ್ತಿಗೆ ಸಂಬಂಧಿಸಿದ ಪ್ರಕರಣಗಳು, ಕಂದಾಯ ಪ್ರಕರಣಗಳು, ಇತ್ಯಾದಿ ಸಿವಿಲ್ ಪ್ರಕರಣಗಳು ಲೋಕ ಅದಾಲತ್ ವ್ಯಾಪ್ತಿಗೆ ಬರುತ್ತವೆ ಎಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಉಪಸ್ಥಿತರಿದ್ದರು.

Edited By : Somashekar
Kshetra Samachara

Kshetra Samachara

06/10/2022 03:44 pm

Cinque Terre

2.84 K

Cinque Terre

0