ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಹಾಸ್ಟೆಲ್ ಅವ್ಯವಸ್ತೆ ಬಗ್ಗೆ ಪರಿಶೀಲಿಸಲು ಖುದ್ದು ಅಖಾಡಕ್ಕಿಳಿದ ಡಿ ಸಿ ಶುಭ ಕಲ್ಯಾಣ್....

ತುಮಕೂರು : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟೆಲ್‌ ಅವ್ಯವಸ್ಥೆಯ ಬಗ್ಗೆ ಜಿಲ್ಲಾಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತೀವ್ರ ಬೇಸರ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.

ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಳ್ಳಲು ಪರದಾಡುತ್ತಿರುವ ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಖುದ್ದು ಅವರೇ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಲಾರಂಭಿಸಿದ್ದಾರೆ. ತುಮಕೂರಿನ ಮೆಳೆಕೋಟೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ದಿಢೀ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಸ್ವಚ್ಛತೆ ಇಲ್ಲದ ವಿದ್ಯಾರ್ಥಿಗಳ ಕೊಠಡಿ, ಶೌಚಾಲಯ, ನಿಲಯದ ಆವರಣವನ್ನು ಗಮನಿಸಿದ ಅವರು ನಾಳೆಯೊಳಗಾಗಿ ಎಲ್ಲವನ್ನು ಸ್ವಚ್ಛವಾಗಿಡಬೇಕು. ಮತ್ತೊಮ್ಮೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಸರ್ಕಾರದಿಂದ ಸಂಬಳ ಪಡೆಯುತ್ತಿಲ್ಲವೇ? ಕೆಲಸ ಮಾಡಲು ಉದಾಸೀನವೇಕೆ? ಎಂದು ನಿಲಯದ ವಾರ್ಡನ್ ವೆಂಕಟೇಶ್‌ಗೆ ತರಾಟೆಗೆ ತೆಗೆದುಕೊಂಡರು.

ಸರ್ಕಾರದಿಂದ ಒದಗಿಸಿರುವ ವಾಷಿಂಗ್ ಮೆಷಿನ್ ಮೂಲೆ ಸೇರಿದ್ದರೂ ಕೂಡಲೇ ದುರಸ್ತಿಪಡಿಸಿ ಉಪಯೋಗಿಸಲು ಏನು ಸಮಸ್ಯೆ? ಹೊಡೆದು ಹೋದ ಕಿಟಕಿ-, ಬಾಗಿಲುಗಳನ್ನು ಸರಿಪಡಿಸಿಲ್ಲ. ಮೆನು ಚಾರ್ಟ್‌ನಲ್ಲಿರುವಂತೆ ಮಧ್ಯಾಹ್ನದ ಊಟದಲ್ಲಿ ವಿದ್ಯಾರ್ಥಿಗಳಿಗೆ ಮುದ್ದೆ ನೀಡದೆ ಅನ್ನ, ಸಾರು ಮಾತ್ರ ನೀಡಲಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

17/11/2024 03:44 pm

Cinque Terre

1.42 K

Cinque Terre

0

ಸಂಬಂಧಿತ ಸುದ್ದಿ