ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಭಾರತ್ ಜೋಡೋ ಯಾತ್ರೆಯಿಂದ ಬಿಜೆಪಿಗೆ ನಡುಕ; ಶಾಸಕ ಪರಮೇಶ್ವರ ಕುಹಕ

ತುಮಕೂರು: ಭಾರತ್ ಜೋಡೋ ಪಾದಯಾತ್ರೆಯಿಂದ ಬಿಜೆಪಿಗೆ ಭಯ ಹುಟ್ಟಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದರು.

ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶಕ್ಕೆ ಮಾಡಿರುವ ತ್ಯಾಗವನ್ನು ಬಿಜೆಪಿ ಅರ್ಥ ಮಾಡಿಕೊಂಡಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಎಂಬುದನ್ನು ಮರೆಯಬಾರದು. ಭಾರತವನ್ನು ಭಾರತವಾಗಿ ಒಗ್ಗೂಡಿಸಿದ್ದು ಕಾಂಗ್ರೆಸ್ ಪಕ್ಷ.

ವಿಭಜನೆ ನಾವು ಮಾಡಿಲ್ಲ. ಒಕ್ಕೂಟ ವ್ಯವಸ್ಥೆಯನ್ನು ತಂದು ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆ ಮಾಡಿದವರಾರು? ಪಂಜಾಬನ್ನು ಪ್ರತ್ಯೇಕ ರಾಷ್ಟ್ರ ಮಾಡಲು ಖಲಿಸ್ತಾನದವರು ಹೊರಟಾಗ ಇಂದಿರಾ ಗಾಂಧಿಯವರ ಹತ್ಯೆಯಾಯಿತು. ಬಿಜೆಪಿಯವರು ಇತಿಹಾಸ ಅರ್ಥ ಮಾಡಿಕೊಂಡರೆ ಅವರಿಗೇ ಗೌರವ ಬರುತ್ತದೆ ಎಂದು ಛೇಡಿಸಿದರು.

Edited By : Somashekar
PublicNext

PublicNext

06/10/2022 05:06 pm

Cinque Terre

23.62 K

Cinque Terre

0

ಸಂಬಂಧಿತ ಸುದ್ದಿ