ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜೆಡಿಎಸ್ ಶಾಸಕ ಶ್ರೀನಿವಾಸ್ ಬೇರೆ ಪಕ್ಷದ ಕಡೆ ಮುಖ ಮಾಡಿದ್ದು, ಕ್ಷೇತ್ರದ ಜನತೆ ಶಾಸಕರಿಗೆ ಬಹಿರಂಗವಾಗಿಯೇ ಛೀಮಾರಿ ಹಾಕುತ್ತಿದ್ದಾರೆ.
ಗುಬ್ಬಿ ತಾಲ್ಲೂಕಿನ ನೇರಳೇಕೆರೆ ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ, ಶಾಸಕರಿಗೆ ಗ್ರಾಮದ ಜನತೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ, ನಾವು ನಿನಗೆ ಓಟ್ ಹಾಕಿದ್ದೇವೆ, ನಮಗೆ ಹಾಗೂ ಜೆಡಿಎಸ್ ಪಕ್ಷಕ್ಕೆ ಅನ್ಯಾಯ ಮಾಡಿದ್ದೀರ, ಜೆಡಿಎಸ್ ಪಕ್ಷ ಹಾಗೂ ದೇವೇಗೌಡರು ನಿಮಗೆ ಏನು ಅನ್ಯಾಯ ಮಾಡಿದ್ದರು, ನಿಮ್ಮ ನಿರ್ಧಾರ ಸರಿಯೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಶಾಸಕರು ಜನರ ಪ್ರಶ್ನೆಗೆ ಉತ್ತರ ನೀಡಲಾಗದೆ ಸ್ತಳದಿಂದ ಜಾಗ ಖಾಲಿ ಮಾಡಿದ್ದಾರೆ.
Kshetra Samachara
07/10/2022 11:59 am