ತುಮಕೂರು: ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯವನ್ನ ಲೂಟಿ ಮಾಡಿದ್ದಾರೆ. ಇವರು ಸತ್ಯ ಹರಿಶ್ಚಂದ್ರರಾಗಿದ್ದರೆ ಅವರ ಮೇಲೆ ಕೇಸುಗಳೇಕೆ ದಾಖಲಾಗುತ್ತಿದ್ದವು ಎಂದು ಕಂದಾಯ ಸಚಿವ ಆರ್.ಅಶೋಕ್ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ಅವರು, ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಬೊಮ್ಮಾಯಿ ಮೇಲೆ ಲೋಕಾಯುಕ್ತ ಆಗಲಿ, ಎಸಿಬಿ ಆಗಲಿ, ಎಲ್ಲಾ ಕಡೆ ಒಂದೇ ಒಂದು ಕೇಸು ದಾಖಲಾಗಿಲ್ಲ.ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ವಿರುದ್ಧ 65 ಕೇಸ್ ದಾಖಲಾಗಿತ್ತು,
ಡಿ.ಕೆ.ಶಿವಕುಮಾರ್ ಅವರು ಜೈಲಿನಿಂದ ಈಗ ತಾನೇ ಹೊರಗಡೆ ಬಂದಿದ್ದಾರೆ. ಇಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದರೆ ದೆವ್ವದ ಬಾಯಲ್ಲಿ ಭಗವದ್ಗೀತೆ ಹೇಳಿದಾಗೆ ಎಂದು ಕಿಡಿಕಾರಿದರು. ಅಣ್ಣಾ ಹಜಾರೆ ಅವರು ಬಂದು ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಕೇಳಬಹುದು.ಆದರೆ ಕಾಂಗ್ರೆಸ್ಸಿಗರು ಅರವತ್ತೈದು ವರ್ಷಗಳ ಕಾಲ ರಾಜ್ಯ ಲೂಟಿ ಮಾಡಿದ್ದಾರೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಇವರು ಅದ್ಯಾವ ಮುಖ ಇಟ್ಟುಕೊಂಡು ಪೋಸ್ಟರ್ ಅಂಟಿಸುತ್ತಾರೆ ಗೊತ್ತಿಲ್ಲ. ದೆಹಲಿಯಿಂದ ಹಿಡಿದು ಕರ್ನಾಟಕದ ಕಾಂಗ್ರೆಸ್ ನಾಯಕರು ಜೈಲು ಮತ್ತು ಬೇಲ್ನ ಪೆರೇಡ್ ಮಾಡುತ್ತಿದ್ದಾರೆ. ಹಿಂದೆ ವೀರೇಂದ್ರ ಪಾಟೀಲ್ ಸಿಎಂ ಆಗಿದ್ದಾಗ ಅವರ ಮೇಲೆ ಆರೋಪ ಮಾಡಿ ಕೆಳಗಿಳಿಸಿದರು.ಈಗ ಬೊಮ್ಮಾಯಿ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ.ಕೆಂಗಲ್ ಹನುಮಂತಯ್ಯನವರು ಇದ್ದಾಗಲೂ ಕೂಡ ಅವರ ಮೇಲೆ ಆರೋಪ ಮಾಡಿದ್ದರು. ಭಿಕ್ಷುಕರ ಸ್ಥಿತಿಗೆ ಕಾಂಗ್ರೆಸ್ ಬಂದಿದೆ ಎಂದು ಲೇವಡಿ ಮಾಡಿದರು.
PublicNext
27/09/2022 12:24 pm