ತುಮಕೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಕುಣಿಗಲ್ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಅವರು ಗಾಯಗೊಂಡಿದ್ದ ಸವಾರನನ್ನು ತಮ್ಮ ಕಾರಿನಲ್ಲೇ ಕರೆದೊಯ್ದು ತಾವೇ ಖುದ್ದು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಕುಣಿಗಲ್ ತಾಲ್ಲೂಕು ಕಲ್ಲನಾಯಕನಹಳ್ಳಿ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾಗಿತ್ತು,ಅದೇ ದಾರಿಯಲ್ಲಿ ಸಂಚರಿಸುತ್ತಿದ್ದ ಶಾಸಕ ಡಾ.ರಂಗನಾಥ್ ವಾಹನ
ಸವಾರನನ್ನು ತುರ್ತು ಚಿಕಿತ್ಸೆಗಾಗಿ ತಕ್ಷಣವೇ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಅವರೇ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿದರು.
ನಂತರ ಉನ್ನತ ಮಟ್ಟದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿ ವೈದ್ಯಕೀಯ ಸಲಹೆ ತೆಗೆದುಕೊಳ್ಳುವಂತೆ ಸಲಹೆ ನೀಡಿದರು. ಶಾಸಕರ ಈ ಮಾನವೀಯ ಗುಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
PublicNext
12/09/2022 05:21 pm