ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಕಾರ್ಯಕರ್ತ ಹೃದಯಾಘಾತದಿಂದ ಸಾವು : ಹರಿದು ಬಂತು ನೆರವಿನ ಮಹಾಪೂರ

ತುಮಕೂರು : ದೊಡ್ಡಬಳ್ಳಾಪುರ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೃದಯಾಘಾತದಿಂದ ಮೃತಪಟ್ಟ ತುಮಕೂರು ತಾಲ್ಲೂಕು ಕೋರ ಹೋಬಳಿ ಹಿರೇತೊಟ್ಲುಕೆರೆ ಗ್ರಾಮದ ಸಿದ್ದಲಿಂಗಯ್ಯ ಮನೆಗೆ ಬಿಜೆಪಿ ಮುಖಂಡರು ಭೇಟಿ ಸಾಂತ್ವಾನ ಹೇಳುವ ಜೊತೆಗೆ ಆರ್ಥಿಕ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಮಾಜಿ ಸಚಿವ ಸೊಗಡು ಶಿವಣ್ಣ,ಸಂಸದ ಸವರಾಜು,ತುಮಕೂರುನಗರ ಶಾಸಕ ಜಿ ಬಿ ಜ್ಯೋತಿಗಣೇಶ್,ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ ಕೆ ಮಂಜುನಾಥ್,ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ .ಕೊರಟಗೆರೆ ಬಿಜೆಪಿ ಮಂಡಲಾಧ್ಯಕ್ಷ ಪವನ್ ಕುಮಾರ್, ಕೊರಟಗೆರೆ ಬಿಜೆಪಿ ಟಿಕೇಟ್ ಆಕಾಂಕ್ಷಿ ಅನಿಲ್ ಕುಮಾರ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಬಿಜೆಪಿ ರಾಜ್ಯ ಘಟಕದಿಂದ ಮೃತರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ವಿತರಿಸಲಾಗಿದೆ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ ಕೆ ಮಂಜುನಾಥ್, ಕೊರಟಗೆರೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್,ಕೊರಟಗೆರೆ ಬಿಜೆಪಿ ಮಂಡಲಾಧ್ಯಕ್ಷ ಪವನ್ ಕುಮಾರ್ ತಲಾ 10000 ಕೋರ ಹೋಬಳಿ ಬಿಜೆಪಿ ಘಟಕದಿಂದ 5000 ಹಾಗೂ ಮುನಿಯಪ್ಪ ಆರ್ಥಿಕ ಸಹಾಯ ಮಾಡಿದ್ದಾರೆ. ಧನ ಸಹಾಯ ಮಾಡಿದ್ದಾರೆ. ಈ ವೇಳೆ ಕೋರ ಹೋಬಳಿ ಬಿಜೆಪಿ ಅಧ್ಯಕ್ಷ ರಾಜೇಂದ್ರಕುಮಾರ್, ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಶ್ರೀಧರ್, ತಾಲ್ಲೂಕು ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹಿರೇಗುಂಡಗಲ್ ಲೋಕೇಶ್ ,ಬಿಜೆಪಿ ಮುಖಂಡ ಹಿರೇತೊಟ್ಲುಕೆರೆ ವಿಶ್ವನಾಥ್ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

12/09/2022 12:13 pm

Cinque Terre

2.04 K

Cinque Terre

0

ಸಂಬಂಧಿತ ಸುದ್ದಿ