ತುಮಕೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಅಕ್ಟೋಬರ್ 8ರಂದು ತುಮಕೂರು ಜಿಲ್ಲೆಗೆ ಪ್ರವೇಶ ಮಾಡಲಿದೆ ಎಂದು ಕೊರಟಗೆರೆ ಕ್ಷೇತ್ರದ ಶಾಸಕ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಮುಖಂಡರ ನೇತೃತ್ವದಲ್ಲಿ ಸಭೆ ನಡೆದಿದ್ದು ಭರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಈ ವೇಳೆ ಉಪಹಾರ, ಭದ್ರತೆ, ಪ್ರಯಾಣ, ಪ್ರಯಾಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ನಾಯಕರೊಂದಿಗೆ ಸಮಗ್ರವಾಗಿ ಚರ್ಚಿಸಲಾಗಿದೆ. ಸಭೆಯಲ್ಲಿ ಜಿಲ್ಲೆಯ ಎಲ್ಲಾ ಮುಖಂಡರು ನಾಯಕರು ಭಾಗವಹಿಸಿದ್ದಾರೆ. ಯಾತ್ರೆ ಸಾಗುವ ಎಲ್ಲಾ ಕ್ಷೇತ್ರದಲ್ಲೂ ಅಲ್ಲಿನ ನಾಯಕರು ಜವಾಬ್ದಾರಿಯನ್ನ ತೆಗೆದುಕೊಂಡು ಕೆಲಸ ನಿರ್ವಹಿಸುವ ಬಗ್ಗೆ ತಿಳಿಸಲಾಗಿದೆ ಎಂದರು.
ಪ್ರತಿದಿನ 25ವಸಾವಿರಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ ಎಂದರು.
ಇನ್ನು ತುಮಕೂರು ಜಿಲ್ಲೆಯಲ್ಲಿ ಯಾತ್ರೆ ಸಾಗುವ ಸಂದರ್ಭದಲ್ಲಿ ಪ್ರಿಯಂಕಾ ಗಾಂಧಿ ಅವರು ಸಹ ಭಾಗವಹಿಸಲಿದ್ದು ದಿನಾಂಕವನ್ನು ಅಧಿಕೃತವಾಗಿ ತಿಳಿಸಿಲ್ಲ. ಆದರೆ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಪ್ರಿಯಾಂಕ ಗಾಂಧಿ ಅವರು ಭಾಗವಹಿಸುವ ವೇಳೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಹಿಳೆಯರು ರಾಜ್ಯದಿಂದ ಆಗಮಿಸಿ ಅವರೊಂದಿಗೆ ಭಾಗವಹಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಹ ತಿಳಿಸಿದ್ದಾರೆ. ಹಾಗಾಗಿ ಅದಕ್ಕೋಸ್ಕರ ತಯಾರಿ ನಡೆಯುತ್ತಿದೆ ಎಂದರು.
PublicNext
27/09/2022 10:15 am