ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: 'ಕಲಬುರ್ಗಿ ಸಮಾವೇಶಕ್ಕೆ ತುಮಕೂರು ಜಿಲ್ಲೆಯಿಂದ 30 ಸಾವಿರ ಕಾರ್ಯಕರ್ತರನ್ನು ಕರೆತನ್ನಿ'

ತುಮಕೂರು: ಕಲಬುರ್ಗಿಯಲ್ಲಿ ಅ.30ರಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ನಡೆಯಲಿದ್ದು, ತುಮಕೂರು ಸಂಘಟನಾತ್ಮಕ ಜಿಲ್ಲೆಯಿಂದ 30 ಸಾವಿರ ಜನರನ್ನು ಕರೆತರುವುದು ಪ್ರತಿಯೊಬ್ಬ ಕಾರ್ಯಕರ್ತರ ಜವಾಬ್ದಾರಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದ್ದಾರೆ.

ತುಮಕೂರಿನ ಕಮಲಕೃಪ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಮಾವೇಶದ ಪೂರ್ವ ಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಇನ್ನೂ ಹೆಚ್ಚು ಹೆಚ್ಚು ಸಂಘಟನೆ ಹೊಂದುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಪರ ಯೋಜನೆ ಗಳನ್ನು ಪ್ರತಿ ಗ್ರಾಮಗಳಿಗೂ ತಲುಪಿಸುವ ಕೆಲಸವನ್ನು ಕಾರ್ಯಕರ್ತರು, ಮುಖಂಡರು ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಬೇಕು ಎಂದರು.

ಕಲಬುರ್ಗಿಯಲ್ಲಿ ನಡೆಯುವ ಸಮಾವೇಶಕ್ಕೆ ರಾಜ್ಯದ ಸುಮಾರು 7ರಿಂದ 8 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಹಿಂದುಳಿದ ವರ್ಗಗಳ ಶಕ್ತಿ ಪ್ರದರ್ಶನ ನಡೆಯಲಿದ್ದು, ಮುಂಬರುವ ಚುನಾವಣೆಗೆ ಈ ಸಮಾವೇಶ ದಿಕ್ಸೂಚಿಯಾಗಲಿದೆ ಎಂದರು ಪ್ರತಿಯೊಬ್ಬರೂ ಮನಸ್ತಾಪ, ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನೆಲ್ಲಾ ಬದಿಗೊತ್ತಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮತ್ತು ಕೇಂದ್ರ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಕಾರ್ಯೋನ್ಮುಖ ರಾಗಬೇಕಿದೆ ಎಂದು ತಿಳಿಸಿದರು.

Edited By : Vijay Kumar
PublicNext

PublicNext

04/10/2022 11:27 am

Cinque Terre

9.85 K

Cinque Terre

0