ತುಮಕೂರು: ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ವೈದ್ಯ ಹಾಗೂ ಸುಳ್ಳು ಪ್ರಕರಣ ದಾಖಲಿಸಿದ ಪಿಎಸ್‌ಐ ನಾಗರಾಜ್ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಪತ್ರಕರ್ತರು ಬೃಹತ್ ಪ್ರತಿಭಟನೆ ಬುಧವಾರ ನಡೆಸಿದರು.
ಕೊರಟಗೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಪಘಾತಕ್ಕೊಳಗಾಗಿದ್ದ, ರೋಗಿಯೊಬ್ಬರಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಿದ ವೈದ್ಯರ ನಡೆಗೆ ಪತ್ರಕರ್ತರು ಆಸ್ಪತ್ರೆಗೆ ತೆರಳಿ ವರದಿ ಮಾಡಲು ವಿಡಿಯೋ ಮಾಡುತ್ತಿದ್ದ, ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯ ಡಾ. ನವೀನ್ ಎಂಬುವವರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದು, ಪತ್ರಕರ್ತರ ಕಾರ್ಯ ನಿರ್ವಹಣೆಗೆ ಅಡ್ಡಿಪಡಿಸಿದ ವೈದ್ಯರನ್ನು ಕೂಡಲೇ ಅಮಾನ ತುಗೊಳಿಸಿ ಬಂಧಿಸಬೇಕೆಂದು ಪತ್ರಕರ್ತರು ಆಗ್ರಹಿಸಿದರು.
ನೂರಾರು ಸಂಖ್ಯೆಯಲ್ಲಿ ಸೇರಿದ ಪತ್ರಕರ್ತರು ವೈದ್ಯ ಡಾ. ನವೀನ್ ಹಾಗೂ ಸುಳ್ಳು ಪ್ರಕರಣ ದಾಖಲಿಸಿದ ಪಿ.ಎಸ್.ಐ. ನಾಗರಾಜು ಅವರನ್ನು ಕೂಡಲೇ ಅಮಾ ನತ್ತುಗೊಳಿಸಿ ಬಂಧಿಸ ಬೇಕೆಂದು ಒಕ್ಕೊ ರೊಲಿನಿಂದ ಒತ್ತಾಯಿಸಿದರು.
ನಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿಗಳ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಪತ್ರಕರ್ತರು ಇದ್ದರು.
ವರದಿ ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್,ತುಮಕೂರು
PublicNext
12/10/2022 08:15 pm