ಕಾಪು: ಚಕ್ರ ಸ್ಫೋಟಗೊಂಡು ಟೆಂಪೋ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ನಾರಾಯಣ ಗುರು ಸಂಘದ ಸಮೀಪ ಗುರುವಾರ ನಡೆದಿದೆ.
ಉಡುಪಿ ಕಡೆಯಿಂದ ಉಚ್ಚಿಲಕ್ಕೆ ಹಳೆ ಸಾಮಗ್ರಿಗಳನ್ನು ತುಂಬಿಕೊಂಡು ಚಲಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ಮಿನಿ ಟೆಂಪೋದ ಹಿಂಭಾಗದ ಚಕ್ರ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಅಪಘಾತದಲ್ಲಿ ಚಾಲಕ ಹಾಗೂ ಸಹ ಪ್ರಯಾಣಿಕ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ವಾಹನ ಜಖಂಗೊಂಡಿದೆ.
ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿ, ತನಿಖೆ ನಡೆಸಿದರು.
Kshetra Samachara
08/10/2020 03:09 pm