ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕಾರು ನುಜ್ಜುಗುಜ್ಜಾಗಿದೆ.
ಉಡುಪಿಯಿಂದ ಉಚ್ಚಿಲದತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ಕೆ1 ಹೊಟೇಲ್ ಬಳಿ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಒಟ್ಟು ಮೂರು ಕಾರುಗಳಿಗೆ ಹಾನಿಯುಂಟಾಗಿದ್ದು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Kshetra Samachara
19/05/2022 05:02 pm