ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಆಕಸ್ಮಿಕ; ಎರಡು ಅಂಗಡಿ ಬೆಂಕಿಗಾಹುತಿ, ಲಕ್ಷಾಂತರ ರೂ. ನಷ್ಟ

ಉಡುಪಿ: ಉಡುಪಿಯ ಸರ್ವೀಸ್ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಮುಚ್ಚಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದು ಪಕ್ಕದ ಅಂಗಡಿಗೂ ಹರಡಿ ಎರಡು ಅಂಗಡಿಗಳ ಸಾಮಾನುಗಳು ಸುಟ್ಟು ಕರಕಲಾಗಿವೆ. ಈ 2 ಅಂಗಡಿ ಸಂಪೂರ್ಣ ಸುಟ್ಟು ಸುಮಾರು ಎರಡು ಲಕ್ಷಕ್ಕೂ ಹೆಚ್ಚಿನ ನಷ್ಟ ಉಂಟಾಗಿದೆ.

ಇಂದು ಮುಂಜಾನೆ ವೇಳೆ ಈ ದುರ್ಘಟನೆ ನಡೆದಿದೆ. ನಗರಸಭೆ ಸದಸ್ಯ ಟಿ.ಜಿ. ಹೆಗಡೆ, ನಗರಸಭೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Kshetra Samachara

Kshetra Samachara

11 days ago

Cinque Terre

7.16 K

Cinque Terre

0