ಕಾಪು: ಪಿಕಪ್ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಸ್ಕೂಟಿಗೆ ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲ ಪೇಟೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಮೂಳೂರು ನಿವಾಸಿ ಹಮ್ಮಬ್ಬ ಹಾಗೂ ನಾಲ್ಕು ವರ್ಷ ಪ್ರಾಯದ ಮಗು ಗಾಯಗೊಂಡಿದೆ. ಗಾಯಾಳುಗಳನ್ನು ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಪಿಕಪ್ ವಾಹನ ಉಚ್ಚಿಲ ಪೇಟೆಯಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದು ಹೆದ್ದಾರಿ ವಿಭಾಜಕದ ಮೇಲೇರಿ ಸಾಗಿದ್ದು, ಸುಮಾರು 100 ಮೀಟರ್ ದೂರದಲ್ಲಿ ವಾಹನ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Kshetra Samachara
26/12/2020 09:20 pm