ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು ಕೊಂಬಗುಡ್ಡೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗದ್ದೆಗೆ ಬೆಂಕಿ

ಕಾಪು: ಕಾಪು ಕೊಂಬ ಗುಡ್ಡೆಯ ಅನಂತರಾಜ ರಸ್ತೆಯ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗದ್ದೆಗೆ ಬೆಂಕಿ

ತಗುಲಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಗದ್ದೆಯಲ್ಲಿ ಬೆಂಕಿ ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಯವರ ಸತತ ಒಂದು ಗಂಟೆಯ ಪರಿಶ್ರಮದಿಂದ ಬೆಂಕಿ ನಂದಿಸಲಾಯಿತು.

ಈ ಭಾಗದಲ್ಲಿ ಪದೇ ಪದೇ ಇಂತಹ ವಿದ್ಯುತ್ ಸಮಸ್ಯೆ ಗಳು ಕಂಡು ಬರುತ್ತಿದ್ದು, ಸಂಬಂಧಪಟ್ಟ ಇಲಾಖೆ ಈ‌ ಬಗ್ಗೆ ಗಮನಹರಿಸಿ ಸಮಸ್ಯೆ ಬಗೆಹರಿಸ ಬೇಕೆಂದು ಸ್ಥಳಿಯರಾದ ನಜೀರ್ ಶೇಖ್ ಒತ್ತಾಯಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

28/12/2020 06:58 pm

Cinque Terre

8.5 K

Cinque Terre

0

ಸಂಬಂಧಿತ ಸುದ್ದಿ