ಉಡುಪಿ: ಡಿ.8ರಂದು ತಮಿಳುನಾಡಿನ ವೆಲ್ಲಿಂಗ್ಟನ್ ಬಳಿಯ ಕೂನೂರಿನಲ್ಲಿ ಅಪಘಾತಕ್ಕೀಡಾದ ಭಾರತೀಯ ವಾಯುಸೇನೆಯ ಎಂಐ-17ವಿ5 ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ಅಪ್ಪಟ ದೇಶಪ್ರೇಮಿ, ದೇಶದ ಮೂರು ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥರೆನಿಸಿದ್ದ ಜನರಲ್ ಬಿಪಿನ್ ರಾವತ್ ರವರಿಗೆ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಉಡುಪಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆಯವರು ನುಡಿ ನಮನಗಳನ್ನು ಸಲ್ಲಿಸಿ, ಅಪ್ರತಿಮ ಯೋಧ, ದೇಶದ ಎಲ್ಲಾ ಮೂರು ಸೇನಾ ಪಡೆಗಳನ್ನು ಸಮರ್ಥವಾಗಿ ನಿಭಾಯಿಸಿ, ಭಾರತೀಯ ಸೇನೆಗೆ ಸದಾ ಬೆಂಗಾವಲಾಗಿ ನಿಂತು ದೇಶ ಸೇವೆ ಮಾಡುತ್ತಿದ್ದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ರವರ ದಿಟ್ಟ ನಿಲುವು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಭದ್ರತೆಯ ವಿಚಾರದಲ್ಲಿ ಕೈಗೊಂಡಿರುವ ಪರಿಣಾಮಕಾರಿ ಕ್ರಮಗಳು ಎಂದೆಂದಿಗೂ ಸ್ಮರಣೀಯ. ಮಹಾನ್ ಯೋಧ ಜನರಲ್ ಬಿಪಿನ್ ರಾವತ್ ರವರ ಅಗಲುವಿಕೆ ದೇಶಕ್ಕೆ ತುಂಬಲಾರದ ನಷ್ಟವೆನಿಸಿದೆ. ಅವರ ಸಮರ್ಪಣಾಭಾವದ ದೇಶ ಸೇವೆ ಅಜರಾಮರ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಎಮ್. ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಯನಾ ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
09/12/2021 08:26 pm