ಉಡುಪಿ; ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಯಾತ್ರಿಕರೊಬ್ಬರು ಸಾವನ್ನಪ್ಪಿದ್ದಾರೆ.ಇವರು ರಾಜಾಂಗಣ ವಾಹನ ನಿಲುಗಡೆ ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಿದ್ದುಕೊಂಡಿದ್ದರು.ಇದನ್ನು ಗಮನಿಸಿದ ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಅದಾಗಲೇ ವ್ಯಕ್ತಿ ಮೃತಪಟ್ಟಿರುವುದನ್ನು ವೈದ್ಯರು ದೃಢಿಕರಿಸಿದರು.
ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿ ಇಡಲಾಗಿದೆ. ಮೃತ ವ್ಯಕ್ತಿಗೆ ಅಂದಾಜು 60 ವರ್ಷಗಳಾಗಿದ್ದು, ಹೆಸರು ವಿಳಾಸ ತಿಳಿದು ಬಂದಿಲ್ಲ. ಸಂಬಂಧಿಕರು ತುರ್ತಾಗಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
Kshetra Samachara
20/01/2022 03:00 pm