ಕಾರ್ಕಳ : ನಾಯಿಯೊಂದು ರಸ್ತೆಗೆ ಅಡ್ಡಬಂದಿದ್ದನ್ನು ನೋಡಿ ಒಮ್ಮೆಗೇ ಬ್ರೇಕ್ ಹಾಕಿದ್ದರಿಂದ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದ ಹಿರಿಯ ನಾಗರಿಕರೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಅಜಿತ್ ಕುಮಾರ್ (63) ಎಂದು ಗುರುತಿಸಲಾಗಿದೆ. ಅವರು ಸೋಮವಾರ ಸಂಜೆ ಕಾರ್ಕಳ ಕಸಬಾದ ಗೋಮಟೇಶ್ವರ ಬೆಟ್ಟದ ಹಿಂಭಾಗದ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಸಾಗುತಿದ್ದಾಗ ಗ್ಯಾಸ್ ಗೋಡೌನ್ ಬಳಿ ನಾಯಿಯೊಂದು ರಸ್ತೆಗೆ ಅಡ್ಡಬಂದಾಗ ಒಮ್ಮೆಗೇ ಬ್ರೇಕ್ ಹಾಕಿದ್ದಾರೆ.ಪರಿಣಾಮವಾಗಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದರು.
ಇದರಿಂದ ಅವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಿಸಿದ್ದರೂ, ನಿನ್ನೆ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂಧಿಸದೇ ಮೃತಪಟ್ಟಿದ್ದಾರೆ ಎಂದು ಕಾರ್ಕಳ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
Kshetra Samachara
04/05/2022 12:36 pm