ಬೈಂದೂರು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಪಂಚಾಯತ್ ಅಧ್ಯಕ್ಷೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಎಂಬಲ್ಲಿ ಸಂಭವಿಸಿದೆ.
ಲಲಿತಾ ಶೆಟ್ಟಿ ( 55 ) ಮೃತ ದುರ್ದೈವಿ. ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಲಲಿತಾ ಶೆಟ್ಟಿ ಆಶಾ ಕಾರ್ಯಕರ್ತೆಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ಇವರುಪಂಚಾಯತ್ ಗೆ ತೆರಳಿ ನಂತರ ಮನೆಗೆ ಹೋಗುವಾಗ ಮಾರ್ಗ ಮಧ್ಯೆ ದುರ್ಘಟನೆ ಸಂಭವಿಸಿದ್ದು, ತಲೆಗೆ ತೀವ್ರ ಪೆಟ್ಟುಬಿದ್ದ ಪರಿಣಾಮ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
18/05/2022 12:11 pm