ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ!

ಉಡುಪಿ: ಉಡುಪಿಯ ಕೊಡವೂರು ಸಮೀಪದ ಮೂಡುಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಸಂಭವಿಸಿದೆ.

ಅಡುಗೆ ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ ಕೋಣೆಯ ಪಾತ್ರೆ, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ.

ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕೋಣೆಗೆ ವ್ಯಾಪಿಸಿದೆ.

ಅವಘಡ ಸಂಭವಿಸುತ್ತಿದ್ದಂತೆ ಮನೆಯೊಳಗಿದ್ದವರು ಹೊರಗೆ ಓಡಿ ಬಂದು ಬಚಾವಾದರು.ಈ ವೇಳೆ ಸಾವಿತ್ರಿ ಹಾಗೂ ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ವಿಷಯ ತಿಳಿದು ಸಮಾಜ ಸೇವಕ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ.

Edited By :
Kshetra Samachara

Kshetra Samachara

14/06/2022 08:50 am

Cinque Terre

4.08 K

Cinque Terre

0

ಸಂಬಂಧಿತ ಸುದ್ದಿ