ಮಲ್ಪೆ: ಕಲ್ಲು ಕೋರೆಯ ನೀರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಿನ್ನೆ ಸಂಜೆ ಕೆಳಾರ್ಕಳಬೆಟ್ಟು ವಿಷ್ಣುಮೂರ್ತಿನಗರದಲ್ಲಿ ನಡೆದಿದೆ.
ಮೃತರನ್ನು ವಿಷ್ಣುಮೂರ್ತಿನಗರ ನಿವಾಸಿ ರಾಧಾ(65) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ಕಲ್ಲುಕೋರೆಯ ಬಳಿ ನಡೆದುಕೊಂಡು ಹೋಗುವಾಗ ಅಕಸ್ಮಿಕವಾಗಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
05/07/2022 06:07 pm