ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ: ಕೃಷಿ ಕೆಲಸ ಮಾಡುತ್ತಿದ್ದಾಗ ಯುವ ಕೃಷಿಕ ಕುಸಿದು ಬಿದ್ದು ಸಾವು!

ಹೆಬ್ರಿ : ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಯುವ ಕೃಷಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬೇಳಂಜೆ ಗ್ರಾಮದ ಈಶ್ವರ ನಗರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಈಶ್ವರ ನಗರದ ಕೃಷ್ಣ ನಾಯ್ಕ (26) ಎಂದುಗುರುತಿಸಲಾಗಿದೆ.

ಇವರು ಮನೆ ಸಮೀಪದ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದು, ಈ ವೇಳೆ ವಿಪರೀತ ಎದೆನೋವು ಕಾಣಿಸಿಕೊಂಡು ಅಲ್ಲಿಯೇ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಜು.13ರಂದು ಮುಂಜಾನೆ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

14/07/2022 11:59 am

Cinque Terre

3.84 K

Cinque Terre

1

ಸಂಬಂಧಿತ ಸುದ್ದಿ