ಗಂಗೊಳ್ಳಿ: ಬೈಂದೂರು ತಾಲೂಕಿನ ಹಡವು ಗ್ರಾಮದಲ್ಲಿರುವ ಸೌಪರ್ಣಿಕಾ ಹೊಳೆಯ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.
ಹಡವು ತೆಂಕಿನ ಮನೆ ನಿವಾಸಿ ನಾರಾಯಣ ದೇವಾಡಿಗ (55) ಮೃತ ಮೀನುಗಾರ.ಇವರು ಆ.1ರಂದು ಸಂಜೆ ವೇಳೆ ಮೀನು ಹಿಡಿಯಲು ನದಿಗೆ ಬಲೆ ಹಾಕುತ್ತಿದ್ದಾಗ ಕಾಲು ಜಾರಿ ಬಿದ್ದು, ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದರು.ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
03/08/2022 12:48 pm