ಕಾರ್ಕಳ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪಾಲ್ಗಂಟು ಎಂಬಲ್ಲಿ ಕೃಷಿಕ ಸತೀಶ್ ಬಂಗೇರ(45) ಎಂಬವರು ಮನೆಯ ಬಳಿ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ತೋಡಿನ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿ ದ್ದಾರೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯ ಹಂದಾಡಿ ಗ್ರಾಮದ ಮಕ್ಕಿಮನೆ ಎಂಬಲ್ಲಿ ಸ್ಥಳೀಯ ನಿವಾಸಿ ಬಾಬು ಪೂಜಾರಿ ಎಂಬವರು ಮಗಳ ಮನೆಗೆ ನಡೆದುಕೊಂಡು ಹೋಗುವಾಗ ಗಾಳಿಮಳೆ ರಭಸಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಸಮೀಪದ ಕೆರೆ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
08/08/2022 02:58 pm