ಕುಂದಾಪುರ: ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿದ ಕೇರಳದ ತಿರುವನಂತಪುರದ ಯಾತ್ರಾರ್ಥಿ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಶನಿವಾರ ಸಂಜೆ ಸಂಭವಿಸಿದೆ.
ತಿರುವನಂತಪುರದಿಂದ 14 ಮಂದಿಯ ತಂಡ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿದ್ದು ಎಲ್ಲರೂ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಈ ಸಂದರ್ಭ ಮುರುಗನ್ ಅವರ ಪತ್ನಿ ಶಾಂತಿ ಶೇಖರನ್ (42) ಅವರು ನೀರುಪಾಲಾದರು. ಮುರುಗನ್ ಮತ್ತು ಪುತ್ರ ಆದಿತ್ಯ ನದಿಯ ಸೆಳೆತಕ್ಕೆ ಒಳಗಾದರೂ ಈಜಿ ದಡ ಸೇರಿದರು. ಮಹಿಳೆಗಾಗಿ ಅಗ್ನಿ ಶಾಮಕ ದಳ, ಕೊಲ್ಲೂರು ಪೊಲೀಸರು ಹಾಗು ಗ್ರಾಮಸ್ಥರು ಶೋಧ ಕಾರ್ಯ ನಡೆಸುತ್ತಿದ್ದಾರೆ.
Kshetra Samachara
11/09/2022 12:23 pm