ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರ್ವ: ತಂದೆ ಮಗನಿಗೆ ಢಿಕ್ಕಿ ಹೊಡೆದು ಬೈಕ್ ಸವಾರ ಪರಾರಿ: ತಂದೆ ಸಾವು,ಮಗ ಗಂಭೀರ!

ಶಿರ್ವ: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್ ಢಿಕ್ಕಿ ಹೊಡೆದು ತಂದೆ ಮೃತಪಟ್ಟು ಮಗ ಗಂಭೀರ ಗಾಯಗೊಂಡ ಘಟನೆ ಶಿರ್ವದ ಬಂಟಕಲ್ಲು ಪೇಟೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.ಬಾಗಲಕೋಟೆ ಮೂಲದ ಶರಣಪ್ಪ ಬಾಲಪ್ಪ ಗಂಜಿಹಾಳ(40) ಮೃತಪಟ್ಟವರು. ಶ್ರವಣ ಕುಮಾರ(6) ಅಪಘಾತದಲ್ಲಿ ಗಾಯಗೊಂಡವರು.

ಶರಣಪ್ಪ ತಮ್ಮ ಮಗ ಶ್ರವಣಕುಮಾರನೊಂದಿಗೆ ಬುಧವಾರ ರಾತ್ರಿ 7 ಗಂಟೆ ಸುಮಾರಿಗೆ ದಿನಸಿ ತರಲು ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿದ್ದರು. ಈ ವೇಳೆ ಶಂಕರಪುರ ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರ ಇವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಸಾರ್ವಜನಿಕರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತಲೆಗೆ ಗಂಭೀರ ಗಾಯಗೊಂಡ ಶರಣಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಶ್ರವಣ ಕುಮಾರ ಅವರು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿ ಹೊಡೆದ ಬೈಕ್ ಸವಾರ ಬೈಕ್ ನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

22/09/2022 10:39 am

Cinque Terre

3.22 K

Cinque Terre

0

ಸಂಬಂಧಿತ ಸುದ್ದಿ