ಮಣಿಪಾಲ: ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಬಸ್ಸಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಅಲೆವೂರು ರಾಂಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಗೋಪುರದ ಬಳಿ ಸಂಭವಿಸಿದೆ.
ಜಾರ್ಖಂಡ್ ಮೂಲದ ಮಂಜಯ್ ಕುಮಾರ್ (19) ಮೃತಪಟ್ಟ ಯುವಕ. ಭಾನುವಾರ ಮಧ್ಯಾಹ್ನದ ವೇಳೆ ಅಲೆವೂರು ಗ್ರಾಮದ ರಾಂಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಗೋಪುರದ ಬಳಿ ನಿಂತಿದ್ದ ಉಡುಪಿ ಕಡೆಯಿಂದ ಮೂಡುಬೆಳ್ಳೆ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ನ್ನು ಕಂಡಕ್ಟರ್ ಬಸ್ಸು ಮುಂದಕ್ಕೆ ಚಲಿಸಲು ಯಾವುದೇ ಸೂಚನೆ ನೀಡದೇ ಇದ್ದರೂ ಅದರ ಚಾಲಕ ಒಮ್ಮೆಲೆ ನಿರ್ಲಕ್ಷ್ಯತನದಿಂದ ಮುಂದಕ್ಕೆ ಚಲಾಯಿಸಿದ ಪರಿಣಾಮ ಬಸ್ಸಿನಿಂದ ಇಳಿಯುತ್ತಿದ್ದ ಯುವಕ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ.
ಪರಿಣಾಮವಾಗಿ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ರಾತ್ರಿ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅಪಘಾತವಾದ ಬಸ್ ನ ಚಾಲಕನನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
10/10/2022 09:02 pm