ನೀಲಾವರ: ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಅಂದೋಲನದಡಿ ನಾಟಿ ಮಾಡಲಾದ ಭತ್ತದ ಬೆಳೆಯ ಕಟಾವು ಕಾರ್ಯ ನಡೆಯುತ್ತಿದ್ದು, ನೀಲಾವರ ಗ್ರಾಮ ಪಂಚಾಯತ್ ಭಾಗದ ಗದ್ದೆಗಳ ಕಟಾವು ಕಾರ್ಯವನ್ನು ಶಾಸಕರಾದ ಕೆ. ರಘುಪತಿ ಭಟ್ ರವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಡಾll. ಶಂಕರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
27/11/2021 04:04 pm