ಹಿರಿಯಡ್ಕ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಮತ್ತು ಹಲವು ಗ್ರಾಮಗಳಿಗೆ ನೀರಿಣಿಸುವ ಜೀವನದಿ ಸ್ವರ್ಣಾ. ಸ್ವರ್ಣಾ ನದಿಯ ಬಜೆ ಡ್ಯಾಮ್ ಗೆ ಶಾಸಕ ಕೆ. ರಘುಪತಿ ಭಟ್ ಅವರು ನಗರ ಸಭೆಯ ಅಧಿಕಾರಿಗಳೊಂದಿಗೆ ಇಂದು ಭೇಟಿ ಕೊಟ್ಟು ನೀರಿನ ಮಟ್ಟವನ್ನು ಪರಿಶೀಲಿಸಿದರು. ಮುಂದಿನ ದಿನಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಲಿರುವುದರಿಂದ ನೀರಿನ ಪಂಪಿಂಗ್ ಹಾಗೂ ನೀರಿನ ಪೂರೈಕೆಗೆ ಬೇಕಾಗುವ ಪೂರ್ವ ತಯಾರಿಯನ್ನು ಮಾಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಪೌರಾಯುಕ್ತರಾದ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್, ಅಭಿಯಂತರರಾದ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.
Kshetra Samachara
31/12/2021 06:35 pm